- Advertisement -
- Advertisement -

ಉಡುಪಿ: ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆಯ ವೇಳೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಪ್ರಯಾಣಿಸುತ್ತಿದ್ದ ಕಾರು ಸಹಿತ ಮೂರು ಕಾರುಗಳ ಮಧ್ಯೆ ಅಪಘಾತ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರು ಹಾಗೂ ಇತರ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿದ್ದು ಇದರಿಂದ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಸಣ್ಣಪುಟ್ಟ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇತರ ಕಾರಿನಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
- Advertisement -







