Sunday, November 15, 2026
spot_imgspot_img
spot_imgspot_img

222 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪ್ರಾಂಶುಪಾಲರ ನೇಮಕಾತಿ ಆದೇಶ

- Advertisement -
- Advertisement -

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ರಾಜ್ಯ ಸರಕಾರ ಚಾಲನೆ ನೀಡಿದ್ದು, 222 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹೊರಡಿಸಿದೆ.2022ರಲ್ಲಿ ಒಟ್ಟು 310 ಪ್ರಾಂಶುಪಾಲರ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು.

ಇದೀಗ ಮೊದಲ ಹಂತದಲ್ಲಿ ದಾಖಲೆ ಪರಿಶೀಲನೆ ಪೂರ್ಣಗೊಳಿಸಿರುವ 222 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ.ಉಳಿದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಂದುವರಿದಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಅವರಿಗೂ ನೇಮಕಾತಿ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಹೊಸದಾಗಿ ನೇಮಕಗೊಂಡ ಪ್ರಾಂಶುಪಾಲರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

- Advertisement -

Related news

error: Content is protected !!