Sunday, November 15, 2026
spot_imgspot_img
spot_imgspot_img

ಬಂಗಾಳ ಕೊಲ್ಲಿಯಲ್ಲಿ ಹೊಸ ಚಂಡಮಾರುತದ ಭೀತಿ; ನ.17ರಂದು ತೀವ್ರಗೊಳ್ಳುವ ಸಾಧ್ಯತೆ

- Advertisement -
- Advertisement -

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ನವೆಂಬರ್ 17ರಂದು ಇದು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ನವೆಂಬರ್ 15ರಂದು ವಾಯುಭಾರ ಕುಸಿತ ಉಂಟಾಗಿದ್ದು, ಇದು ಉತ್ತರ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ. ಈಗಾಗಲೇ ವಾಯುಭಾರ ಕುಸಿತವು ವಾಯುಭಾರ ಕುಸಿತದ ತೀವ್ರ ಸ್ವರೂಪ (Depression) ಪಡೆದುಕೊಂಡಿದೆ.

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ನವೆಂಬರ್ 16ರಂದು ಇದು ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆಯಿದೆ.

ಬಳಿಕ ನವೆಂಬರ್ 17ರಂದು ತೀವ್ರ ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆಯಿದೆ.
ನವೆಂಬರ್ 17ರಂದು ಗಾಳಿಯ ವೇಗ ಗಂಟೆಗೆ 90ರಿಂದ 100 ಕಿ.ಮೀ. ತಲುಪುವ ಸಾಧ್ಯತೆಯಿದ್ದು, ಕೆಲವೊಮ್ಮೆ 110 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆಯ ಮುನ್ಸೂಚನೆ

ಚಂಡಮಾರುತದ ಪ್ರಭಾವದಿಂದ ನವೆಂಬರ್ 18ರಿಂದ 19ರವರೆಗೆ ತಮಿಳುನಾಡಿನಲ್ಲಿ, ನವೆಂಬರ್ 19ರಿಂದ 20ರವರೆಗೆ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಹಾಗೂ ನವೆಂಬರ್ 19ರಿಂದ 21ರವರೆಗೆ ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಚಂಡಮಾರುತದ ಮುಂದಿನ ಚಲನೆ, ತೀವ್ರತೆ ಹಾಗೂ ಭೂಭಾಗ ಪ್ರವೇಶಿಸುವ ಸ್ಥಳದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.

ಮೀನುಗಾರರು ಮತ್ತು ಕರಾವಳಿ ಪ್ರದೇಶದ ಜನರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನಿಸುವಂತೆ ಸೂಚಿಸಲಾಗಿದೆ.

- Advertisement -

Related news

error: Content is protected !!