Friday, November 13, 2026
spot_imgspot_img
spot_imgspot_img

ಮಂಗಳೂರಿನಲ್ಲಿ ಇಬ್ಬರು ಬಾಂಗ್ಲಾದೇಶದ ಅಕ್ರಮ ವಲಸಿಗರ ಪತ್ತೆ; ಗಡಿಪಾರು ಪ್ರಕ್ರಿಯೆಗೆ ಚಾಲನೆ

- Advertisement -
- Advertisement -

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಬಾಂಗ್ಲಾದೇಶದ ಇಬ್ಬರು ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಸಲೀಂ ಅಬ್ಬಾಸ್ ನೇತೃತ್ವದ ತಂಡ ರೆಸ್ಟೋರೆಂಟ್‌ಗೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಅವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪಣಂಬೂರು ಠಾಣೆಯ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ. ಮತ್ತು ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

- Advertisement -

Related news

error: Content is protected !!