Wednesday, October 28, 2026
spot_imgspot_img
spot_imgspot_img

ಬಂಟ್ವಾಳ: ಸ್ಟುಡಿಯೋ ಮಾಲೀಕನ ಕೊಲೆ ಯತ್ನ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಬಂಟ್ವಾಳ: ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88 ಸಾವಿರ ದಂಡ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.2020ರ ಅಕ್ಟೋಬರ್ 28ರಂದು ಸಂಜೆ ಬಂಟ್ವಾಳದ ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕ ದಿನೇಶ್ ಅವರು ಸ್ಟುಡಿಯೋದಲ್ಲಿದ್ದ ವೇಳೆ, ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಸ್ಟುಡಿಯೋಗೆ ನುಗ್ಗಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ್ದರು.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಗಳಾದ ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ ಅಲಿಯಾಸ್ ಮುನ್ನಿ ಹಾಗೂ ಮಹಮ್ಮದ್ ಸವಾದ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 28ರಂದು ನಾಲ್ವರು ಆರೋಪಿಗಳಿಗೆ ತಲಾ 7 ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು ₹88 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.

- Advertisement -

Related news

error: Content is protected !!