Tuesday, October 27, 2026
spot_imgspot_img
spot_imgspot_img

ಮಂಗಳೂರು: ಖಾಸಗಿ ಪದವಿ ಕಾಲೇಜಿನಲ್ಲಿ ರ್ಯಾಗಿಂಗ್ ಆರೋಪ; ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು: ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ ಏನಿದೆ?ಅ. 2ರಂದು ದೂರುದಾರ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಪ್ರಾರ್ಥನೆಗೆಂದು ಕಾಲೇಜು ಆವರಣದ ಹೊರಗೆ ತೆರಳಿದ್ದ ವೇಳೆ ಹಿರಿಯ ವಿದ್ಯಾರ್ಥಿಗಳಾದ ಅಶಬ್ ಹಾಗೂ ಅಶ್ನಾಕ್ ಬಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅ. 15ರಂದು ದೂರುದಾರ ವಿದ್ಯಾರ್ಥಿ ಹಾಗೂ ಇತರ ಆರು ಮಂದಿ ಸ್ನೇಹಿತರು ಊಟಕ್ಕೆಂದು ಕಾಲೇಜು ಕ್ಯಾಂಪಸ್ ಮುಂಭಾಗದ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಆರೋಪಿ ಅಶಬ್ ಅವರನ್ನು ಖಾಸಗಿ ಹೋಟೆಲ್‌ನ ಕೊಠಡಿಗೆ ಕರೆದೊಯ್ದು ಅಕ್ರಮವಾಗಿ ಕೂಡಿ ಹಾಕಿದ್ದಾನೆ. ಬಳಿಕ ಹಾಡು ಹಾಡುವಂತೆ ಒತ್ತಾಯಿಸಿ, ಹಾಡದಿದ್ದರೆ ಕೊಠಡಿಯಿಂದ ಹೊರಗೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ವಿದ್ಯಾರ್ಥಿಗಳು ಹಾಡಿದ್ದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಇತರರಿಗೆ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಅ. 22ರಂದು ಆರೋಪಿ ಅಶಬ್ ಹಾಗೂ ಮತ್ತೊಬ್ಬ ವಿದ್ಯಾರ್ಥಿ ಬೈಕ್‌ನಲ್ಲಿ ಬಂದು ದೂರುದಾರನ ಸ್ನೇಹಿತನನ್ನು ಜಾಹಿದ್ ಎಂಬಾತನ ಕೊಠಡಿಗೆ ಕರೆದೊಯ್ದು ರ್ಯಾಗಿಂಗ್ ಮಾಡಿದ್ದಾರೆ ಎನ್ನಲಾಗಿದೆ.

ದಿನಕ್ಕೊಬ್ಬರಂತೆ ವಿದ್ಯಾರ್ಥಿಗಳನ್ನು ಕರೆದೊಯ್ದು ರ್ಯಾಗಿಂಗ್ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೈಕಾಲು ಮುರಿಯುವುದಾಗಿ ಹಾಗೂ ಕಬರಸ್ಥಾನಕ್ಕೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ದೂರಿನಲ್ಲಿ ಆರೋಪಿಸಿದ್ದಾನೆ.

ಈ ಸಂಬಂಧ ಅಶಬ್, ಅಶ್ನಾಕ್ ಹಾಗೂ ಇತರರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!