Sunday, November 8, 2026
spot_imgspot_img
spot_imgspot_img

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ನ್ಯಾಯಾಲಯದಿಂದ ರಿಲೀಫ್; ಚಿಕಿತ್ಸೆ ಪಡೆಯಲು ಅನುಮತಿ

- Advertisement -
- Advertisement -


ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯದಿಂದ ರಿಲೀಫ್ ದೊರೆತಿದೆ. ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ ಅವರು ಚಿಕಿತ್ಸೆ ಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.


ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯವು ದರ್ಶನ್ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ವ್ಯವಸ್ಥೆ ಕಲ್ಪಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದೆ.


ಜೈಲಿನಲ್ಲಿರುವ ದರ್ಶನ್ ಅವರು ಬೆನ್ನುನೋವಿನ ಸಮಸ್ಯೆಗೆ ಚಿಕಿತ್ಸೆ ಪಡೆಯುವ ಅಗತ್ಯವಿದೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಚಿಕಿತ್ಸೆ ಒದಗಿಸಲು ಅನುಮತಿ ನೀಡಿದೆ.


ನ್ಯಾಯಾಲಯದ ಈ ಆದೇಶದಿಂದ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಅವಕಾಶ ದೊರೆತಂತಾಗಿದೆ. ಆದರೆ, ಈ ಆದೇಶ ಜಾಮೀನು ಮಂಜೂರಾತಿಗೆ ಸಂಬಂಧಿಸಿದ್ದಲ್ಲ.

- Advertisement -

Related news

error: Content is protected !!