
ವಿಟ್ಲ: ವಿದ್ಯಾರ್ಥಿಗಳಲ್ಲಿ ಮಕ್ಕಳ ರಕ್ಷಣೆ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಜೂನ್ 12ರಂದು ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ POCSO ಕಾಯ್ದೆ ಕುರಿತ ಜಾಗೃತಿ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರದಲ್ಲಿ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿಗಳು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ POCSO ಕಾಯ್ದೆಯ ಮಹತ್ವ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ಸುರಕ್ಷತಾ ಕ್ರಮಗಳು ಹಾಗೂ ಮೊಬೈಲ್ ಫೋನ್ ದುರ್ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಕಾನೂನು ಅರಿವು ಹೊಂದುವ ಜೊತೆಗೆ ತಮ್ಮ ಸುರಕ್ಷತೆಯ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿ ಜೆ.ಸಿ. ಪ್ರಭಾಕರ ಶೆಟ್ಟಿ, ವಿಟ್ಲ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಮಕೃಷ್ಣ, ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಹರೀಶ್, ಪಿಎಸ್‌ಐ ಬಿ.ಎಸ್. ನಾಯಕ್, ಶಾಲೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಿಕ್ಷಕಿ ಧನಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.








