Tuesday, August 25, 2026
spot_imgspot_img
spot_imgspot_img

ಆಸಿಡ್ ದಾಳಿ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

- Advertisement -
- Advertisement -

ಪುತ್ತೂರು: ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.ಕಡಬ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಅ.ಕ್ರ. 06/2020ರ ಪ್ರಕರಣದಲ್ಲಿ ಕಡಬ ಕೊಡಿಯಂಬಳ ನಿವಾಸಿ ಜಯಾನಂದ ಕೆ. (60) ಆರೋಪಿ ಆಗಿದ್ದರು. ಪ್ರಕರಣದಲ್ಲಿ ಐಪಿಸಿ ಕಲಂ 354A, 509, 504, 506, 448, 307 ಹಾಗೂ 326A ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಆಗಿನ ತನಿಖಾಧಿಕಾರಿ ಹಾಗೂ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಕುಸುಮಧರ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ಪುತ್ತೂರಿನಲ್ಲಿ ನಡೆದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಅವರು ಆರೋಪಿಗೆ ಐಪಿಸಿ ಕಲಂ 326A ಅಡಿಯಲ್ಲಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.3 ಲಕ್ಷ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ಆದೇಶಿಸಲಾಗಿದೆ.ಅದೇ ರೀತಿ, ಐಪಿಸಿ ಕಲಂ 504ರ ಅಡಿಯಲ್ಲಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ ರೂ.5,000 ದಂಡ ವಿಧಿಸಲಾಗಿದೆ.

ದಂಡ ಪಾವತಿಸಲು ವಿಫಲವಾದಲ್ಲಿ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗಿದೆ.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ್, ಪ್ರಕಾಶ್ ಚಂದ್ರ ಶೆಟ್ಟಿ ಹಾಗೂ ಶ್ರೀಮತಿ ಜಯಂತಿ ಕೆ. ಅವರು ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

- Advertisement -

Related news

error: Content is protected !!