


ಬಂಟ್ವಾಳ: ಬಂಟರ ಸಂಘ ಬಂಟ್ವಾಳ ತಾಲೂಕು (ರಿ) ಇದರ ನೇತೃತ್ವದಲ್ಲಿ, ಮಹಿಳಾ ವಿಭಾಗದ ಸಹಕಾರದೊಂದಿಗೆ ಯುವ ವಿಭಾಗದ ವತಿಯಿಂದ ಅಶಕ್ತ ಕುಟುಂಬಕ್ಕೆ ಗೃಹ ನಿರ್ಮಾಣ ಹಾಗೂ ಆರ್ಥಿಕ ಸಹಾಯಾರ್ಥ ‘ಮಹಿಮೆದ ಅಪ್ಪೆ ಭಗವತಿ’ ತುಳು ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.ಅ.3ರಂದು ಬಂಟ್ವಾಳದ ಬಂಟರ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಮಂಡಲ (ರಿ) ಇರಾ ಇದರ ಕಲಾವಿದರಿಂದ ನಾಟಕ ಪ್ರದರ್ಶನಗೊಂಡಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕಾತ್ಯಾಯಿನಿ ಆಳ್ವ, ಮಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ಸಿಎ ನಿಶಿತ್ ಭಂಡಾರಿ, ಖ್ಯಾತ ನಿರೂಪಕ ಹಾಗೂ ನಾಟಕ ರಚನೆಗಾರ ಕದ್ರಿ ನವನೀತ ಶೆಟ್ಟಿ, ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಸದಾನಂದ ಆಳ್ವ ಕಂಪ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತ ಪಿ. ರೈ ಉಪಸ್ಥಿತರಿದ್ದರು.ಯುವ ವಿಭಾಗದ ಅಧ್ಯಕ್ಷ ಗೋಕುಲ್ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಭರತನಾಟ್ಯದಲ್ಲಿ ಸಾಧನೆ ಮಾಡಿದ ಯುವ ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯೆ ವಿದುಷಿ ಸಹನಾ ಎಂ. ಶೆಟ್ಟಿ ನರ್ವಲ್ದಡ್ಡ ಅವರನ್ನು ಸನ್ಮಾನಿಸಲಾಯಿತು. ನಾಟಕದ ರಚನೆಗಾರ ಕದ್ರಿ ನವನೀತ ಶೆಟ್ಟಿ ಹಾಗೂ ನಿರ್ದೇಶಕ ನಿತೇಶ್ ಶೆಟ್ಟಿ ಇರಾ ಅವರನ್ನು ಗೌರವಿಸಲಾಯಿತು.
ತಾಲೂಕು ಬಂಟರ ಸಂಘದ ಜೊತೆ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಸಜಿಪ, ಜೊತೆ ಕೋಶಾಧಿಕಾರಿ ವಿದ್ಯಾ ಎ. ರೈ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಯುವ ವಿಭಾಗದ ಕಾರ್ಯದರ್ಶಿ ಸುನಾದ್ ರಾಜ್ ಶೆಟ್ಟಿ ಸನ್ಮಾನ ಪತ್ರ ವಾಚಿಸಿದರು. ಜೊತೆ ಕಾರ್ಯದರ್ಶಿ ಸುವೀಕ್ಷ ಭಂಡಾರಿ ವಂದಿಸಿದರು. ನಾಗೇಶ್ ಶೆಟ್ಟಿ ಬೊಂಡಾಲ ಕಾರ್ಯಕ್ರಮ ನಿರೂಪಿಸಿದರು. ಯುವ ವಿಭಾಗದ ಉಪಾಧ್ಯಕ್ಷ ರಂಜಿತ್ ಶೆಟ್ಟಿ ಹಾಗೂ ಕೋಶಾಧಿಕಾರಿ ರತನ್ ರೈ ಸಹಕರಿಸಿದರು.








