Monday, September 14, 2026
spot_imgspot_img
spot_imgspot_img

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ದಾಳಿ; 10ಕ್ಕೂ ಹೆಚ್ಚು ಮಂದಿ ಗಾಯ

- Advertisement -
- Advertisement -

ಯಾದಗಿರಿ : ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ.ಚಾಮನಾಳ ಗ್ರಾಮದ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ ಗ್ರಾಮದ ಕೆಲ ಯುವಕರು ದೊಣ್ಣೆ ಹಾಗೂ ಕಲ್ಲುಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಜಾತಿ ನಿಂದನೆ ಹಾಗೂ ಕೊಲೆಯತ್ನ ಸೇರಿದಂತೆ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಉಳಿದ ಆರೋಪಿಗಳನ್ನೂ ಕೂಡಲೇ ಬಂಧಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!