- Advertisement -
- Advertisement -

ಬೆಳ್ಳಾರೆ: ಸವಣೂರು ಕುವತ್ತೋಡಿಯ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅ.20ರಂದು ಸಂಜೆ ಪೊಲೀಸ್ ಉಪನಿರೀಕ್ಷಕ ಈರಯ್ಯ ಡಿ.ಎನ್. ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ಗುರವ, ಇಸೂಬು, ಕುಶಾಲಪ್ಪ, ತಾಜುದ್ದೀನ್ ಹಾಗೂ ರಾಮಣ್ಣ ಎಂಬವರನ್ನು ವಶಕ್ಕೆ ಪಡೆದಿದ್ದಾರೆ.ಈ ವೇಳೆ ಜೂಜಾಟಕ್ಕೆ ಬಳಸಿದ್ದ ₹18,150 ನಗದು, ಇಸ್ಪೀಟು ಎಲೆಗಳು ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆ.ಪಿ. ಕಾಯ್ದೆಯ ಕಲಂ 87ರಡಿ ತನಿಖೆ ಮುಂದುವರಿದಿದೆ.
- Advertisement -







