- Advertisement -
- Advertisement -

ಬಂಟ್ವಾಳ: ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿಯಲ್ಲಿ ಅ.25ರಂದು ನಡೆದಿದೆ.ಕುಕ್ಕಿಪಾಡಿ ನಿವಾಸಿ ಆನಂದ ಪೂಜಾರಿ ಅವರ ಪುತ್ರ ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ.
ಬಾಲಕ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಕಿಟಕಿಯಲ್ಲಿದ್ದ ಹಗ್ಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಉಸಿರುಗಟ್ಟಿದ ಪರಿಣಾಮ ಅಸ್ವಸ್ಥಗೊಂಡಿದ್ದಾನೆ ಎನ್ನಲಾಗಿದೆ.ಈ ವೇಳೆ ಬೊಬ್ಬೆ ಕೇಳಿ ಸ್ಥಳಕ್ಕೆ ಬಂದ ಬಾಲಕನ ದೊಡ್ಡಪ್ಪ ಜಯಾನಂದ ಅವರು, ಬಾಲಕ ಯಾವುದೇ ಪ್ರತಿಕ್ರಿಯೆ ನೀಡದಿರುವುದನ್ನು ಗಮನಿಸಿ ತಕ್ಷಣ ಉಪಚರಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಬಾಲಕನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಸಂಖ್ಯೆ 27/2026, ಬಿಎನ್‌ಎಸ್‌ಎಸ್ ಕಲಂ 194ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -








