Thursday, July 16, 2026
spot_imgspot_img
spot_imgspot_img

ಬಂಟ್ವಾಳ: ಬಿ.ಸಿ.ರೋಡ್‌ನಲ್ಲಿ ಯುವತಿ ಮೇಲೆ ಮಾರಣಾಂತಿಕ ದಾಳಿ; ಚಿಕಿತ್ಸೆ ಫಲಕಾರಿಯಾಗದೆ ಸಾವು..!!

- Advertisement -
- Advertisement -

ಬಂಟ್ವಾಳ, ಜು.16: ಬಿಸಿ ರೋಡ್‌ನ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಅಪರಿಚಿತ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬನು ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.ಗಂಭೀರವಾಗಿ ಗಾಯಗೊಂಡ ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಪರೀಕ್ಷಿಸಿ ಯುವತಿಯು ಘಟನಾ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಗಂಭೀರವಾಗಿ ಗಾಯಗೊಂಡಿದ್ದ ಸದ್ರಿ ಯುವತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಪ್ರಾಥಮಿಕ ತನಿಖೆಯಲ್ಲಿ ಆರೋಪಿಯು ಚೇತನ್ ಎಂಬುದಾಗಿ ತಿಳಿದುಬಂದಿದ್ದು, ಈತನು ಯುವತಿಯ ದೂರದ ಸಂಬಂಧಿ ಹಾಗೂ ಯುವತಿಯನ್ನು ಏಕಪಕ್ಷೀಯ ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿರುತ್ತದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ನಗರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!