- Advertisement -
- Advertisement -

ಸಿಂಧನೂರು : ಕೇವಲ ಎರಡು ತಿಂಗಳ ಗಂಡು ಮಗುವಿನ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಪತ್ತೆಯಾಗಿರುವ ಅಪರೂಪದ ವೈದ್ಯಕೀಯ ಪ್ರಕರಣ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯಿಂದ ಸಿಂಧನೂರಿನ ಸಹನಾ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದ ಹಸುಗೂಸಿನಲ್ಲಿ ಈ ಅಸಹಜ ಬೆಳವಣಿಗೆ ಕಂಡುಬಂದಿದ್ದು, ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.ಗದಗ ಜಿಲ್ಲೆಯ ದಂಪತಿ ತಮ್ಮ ಎರಡು ತಿಂಗಳ ಗಂಡು ಮಗುವಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಂಧನೂರಿನ ಸಹನಾ ಆಸ್ಪತ್ರೆಗೆ ಕರೆತಂದಿದ್ದರು. ಮಗುವನ್ನು ಪರೀಕ್ಷಿಸಿದ ವೈದ್ಯ ಡಾ.ಶಿವರಾಜ ಪಾಟೀಲ್ ಅವರಿಗೆ ಹೊಟ್ಟೆಯೊಳಗೆ ಮತ್ತೊಂದು ಭ್ರೂಣ ಇರುವ ಅಪರೂಪದ ಸ್ಥಿತಿ ಕಂಡುಬಂದಿದೆ. ಮಗುವಿನ ಆರೋಗ್ಯದ ಸೂಕ್ಷ್ಮತೆಯನ್ನು ಗಮನಿಸಿದ ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ವೈದ್ಯಕೀಯ ಸೌಲಭ್ಯವಿರುವ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.
- Advertisement -







