- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಅತ್ಯಾಚಾರ ಹಾಗೂ ಜೀವ ಬೆದರಿಕೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2023ರಲ್ಲಿ ರಾತ್ರಿ ವೇಳೆ ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ, ಸಂಬಂಧಿಕನಾದ ಸುರೇಶ್ ಎಂಬಾತ ಮನೆಗೆ ಬಂದು ಅತ್ಯಾಚಾರ ಎಸಗಿದ್ದು, ಬಳಿಕ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.ಈ ಸಂಬಂಧ ಮಹಿಳೆ ಜೂನ್ 7, 2026ರಂದು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 41/2026ರಡಿ ಭಾರತೀಯ ದಂಡ ಸಂಹಿತೆಯ 376 (ಅತ್ಯಾಚಾರ) ಹಾಗೂ 506 (ಜೀವ ಬೆದರಿಕೆ) ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಜೂನ್ 9ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ತನಿಖೆ ಮುಂದುವರಿದಿದೆ.
- Advertisement -








