





ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ವಿಟ್ಲ ಘಟಕದ ಆತಿಥ್ಯದಲ್ಲಿ ಜಿಲ್ಲಾ ವಾರ್ಷಿಕ ಮಿಲನೋತ್ಸವ-2026 ಅ.6ರಂದು ವಿಟ್ಲ ಬಸವನಗುಡಿಯ ವಿಠಲ್ ಜೇಸೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ನಡೆಯುವ ಉದ್ಘಾಟನಾ ಸಮಾರಂಭವನ್ನು ವಿಟ್ಲ ಅರಮನೆಯ ಶ್ರೀ ಬಂಗಾರು ಅರಸರು ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಬಾಬು ಕೆ. ವಿಟ್ಲ ಅಧ್ಯಕ್ಷತೆ ವಹಿಸಲಿದ್ದಾರೆ.ಆರೋಗ್ಯ ಸಚಿವ ಯು.ಟಿ. ಖಾದರ್, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನ್ಯಾತೊಟ್ಟು, ವಿಠಲ್ ಜೇಸೀಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅಧ್ಯಕ್ಷ ಶ್ರೀಧರ್ ಶೆಟ್ಟಿ, ವಿಟ್ಲ ಗ್ರಾಮೀಣ ಸಹಕಾರಿ ನಿಯಮಿತದ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್ ಸೇರಿದಂತೆ ಸಂಘದ ಜಿಲ್ಲಾ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಬಂಟ್ವಾಳ, ಮೂಡಬಿದ್ರೆ, ಮಂಗಳೂರು, ಬೆಳ್ತಂಗಡಿ, ಕಡಬ, ಸುಳ್ಯ ಹಾಗೂ ಪುತ್ತೂರು ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 11 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಜಿಲ್ಲೆಯ ಶಾಮಿಯಾನ ಮಾಲಕರ ಸಂಘದ ಸದಸ್ಯರು ಹಾಗೂ ಕುಟುಂಬಸ್ಥರು ಮಿಲನೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ








