Monday, October 26, 2026
spot_imgspot_img
spot_imgspot_img

ಮೈಸೂರು ದಸರಾ: ವಿಜಯ ದಶಮಿಯಂದು ಜಂಬೂಸವಾರಿ ಬೇಡ: ಸರ್ಕಾರಕ್ಕೆ ಪ್ರಮೋದಾದೇವಿ ಒಡೆಯರ್ ಸಲಹೆ

- Advertisement -
- Advertisement -

ಮೈಸೂರು: ನಾಡಹಬ್ಬ ಮೈಸೂರು ದಸರಾ ಆಚರಣೆಯ ಕುರಿತು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರು ರಾಜ್ಯ ಸರ್ಕಾರಕ್ಕೆ ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ವಿಜಯದಶಮಿಯಂದು ಜಂಬೂಸವಾರಿ ನಡೆಸುವ ಬದಲು, ಚಾಮುಂಡೇಶ್ವರಿ ರಥೋತ್ಸವದ ದಿನವೇ ಅಂಬಾರಿ ಮೆರವಣಿಗೆ ನಡೆಸುವಂತೆ ಅವರು ಸೂಚಿಸಿದ್ದಾರೆ.

ಈ ಕುರಿತು ಸುದೀರ್ಘ ಪತ್ರ ಬರೆದಿರುವ ಪ್ರಮೋದಾದೇವಿ ಒಡೆಯರ್, ವಿಜಯದಶಮಿಯಂದು ಅಂಬಾರಿ ಮೆರವಣಿಗೆ ನಡೆಸುವುದರಿಂದ ಅರಮನೆಯ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಾಡದೇವತೆ ಚಾಮುಂಡೇಶ್ವರಿಗೆ ಸೂಕ್ತ ಗೌರವ ಸಲ್ಲಿಸುವ ನಿಟ್ಟಿನಲ್ಲಿ ರಥೋತ್ಸವದ ದಿನವೇ ಅಂಬಾರಿ ಮೆರವಣಿಗೆ ನಡೆಸಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅರಮನೆಯ ಧಾರ್ಮಿಕ ಸಂಪ್ರದಾಯಗಳ ಪಾಲನೆಗೆ ಅಡ್ಡಿಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಅವರು, ಸಮಸ್ಯೆ ಬಗೆಹರಿಯದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ದಸರಾ ಆಚರಣೆಯ ಸಂಪ್ರದಾಯಗಳು ಹಾಗೂ ಅರಮನೆಯ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಪ್ರಮೋದಾದೇವಿ ಒಡೆಯರ್ ಅವರ ಈ ಪತ್ರ ಮಹತ್ವ ಪಡೆದುಕೊಂಡಿದೆ.

- Advertisement -

Related news

error: Content is protected !!