Friday, August 28, 2026
spot_imgspot_img
spot_imgspot_img

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

- Advertisement -
- Advertisement -

ಬೆಳ್ತಂಗಡಿ: ದರೋಡೆ ಪ್ರಕರಣವೊಂದರಲ್ಲಿ ಆರೋಪಿಯಾಗಿ, ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟು ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಅಕ್ರ.ನಂ. 16/2012ರಲ್ಲಿ ಕಲಂ 395 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಆರೋಪಿ ಶ್ರೀನಿವಾಸ್ ಕೆ. @ ಶಿನಪ್ಪ @ ಶೀನ (43) ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವೇಣೂರು ಠಾಣೆಯ ಎಎಸ್‌ಐ ಬೆನ್ನಿಚನ್, ಹೆಡ್ ಕಾನ್‌ಸ್ಟೆಬಲ್ ಕೃಷ್ಣ, ಸಿಪಿಸಿ ಬಸವರಾಜ್ ಎಸ್.ಪಿ. ಹಾಗೂ ಸಿಪಿಸಿ ಮೋಹನ್ ಕುಮಾರ್ ಅವರ ತಂಡವು ವಿಜಯನಗರ ಜಿಲ್ಲೆಯ ಹರಪನಳ್ಳಿ ಕೊರಚರಟ್ಟಿ ಎಂಬಲ್ಲಿ ಆರೋಪಿಯನ್ನು ಬಂಧಿಸಿದೆ.ನಂತರ ಆರೋಪಿಯನ್ನು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

- Advertisement -

Related news

error: Content is protected !!