- Advertisement -
- Advertisement -

ವಿಜಯಪುರ : ಜೀವಂತವಾಗಿರುವ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಸುಳ್ಳು ಮರಣ ಪ್ರಮಾಣ ಪತ್ರ ಸೃಷ್ಟಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಯತ್ನಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಿಜಯಪುರದ ಜಲನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಗರದ ಬಾಗವಾನ್ ಕಾಲೋನಿಯ ನಿವಾಸಿ ಅಬ್ದುಲ್ ರಝಾಕ್ ಮೌಲಾಸಾಬ್ ನೀಡಿದ ದೂರಿನ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.’ತಾವು ಜೀವಂತವಾಗಿದ್ದರೂ, ತಮ್ಮನ್ನೂ ಸೇರಿದಂತೆ ಇತರ ಬದುಕಿರುವ ಜನರನ್ನು ಮೃತಪಟ್ಟಿದ್ದಾರೆ ಎಂದು ಬಿಂಬಿಸಿ ನಕಲಿ ಮರಣ ಪ್ರಮಾಣ ಪತ್ರಗಳನ್ನು ತಯಾರಿಸಲಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಬೆಂಬಲಿಗರು ಕಳೆದ ಸೆ.3 ರಂದು ಈ ಸುಳ್ಳು ಪ್ರಮಾಣ ಪತ್ರಗಳನ್ನು ವಿಜಯಪುರ ನಗರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲು ಕೋರಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.ಜಲನಗರ ಪೊಲೀಸ್ ಠಾಣೆಯ ಅಧಿಕಾರಿಗಳು ದೂರಿನ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

- Advertisement -








