Wednesday, August 5, 2026
spot_imgspot_img
spot_imgspot_img

ಉಪ್ಪಿನಂಗಡಿಯಲ್ಲಿ ಅಕ್ರಮ ಮರ ಸಾಗಾಟ ಪತ್ತೆ; ₹10 ಲಕ್ಷ ಮೌಲ್ಯದ ಮರ, ಲಾರಿ ವಶ

- Advertisement -
- Advertisement -

ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ = ಮರದ KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಶಪಡಿಸಿಕೊಂ ಡ ವಾಹನ ಮತ್ತು ಮರದ ಮೌಲ್ಯ ಅಂದಾಜು 10 ಲಕ್ಷ ರೂಪಾಯಿ ಅಗಿರುತ್ತದೆ.ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯಲ್ಲಿ ವಾಹನ ಚಾಲಕ ಮಂಡ್ಯ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಲೋಕೇಶ್ ಮಗ ರೋಹಿತ್.ಎಸ್(20) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಹೆಚ್.ಪಿ.ರಾಘವೇಂದ್ರ,ಉಪ ವಲಯ ಅರಣ್ಯಾಧಿಕಾರಿ ವಿನಯ್ ಕುಮಾರ್, ಗಸ್ತು ಅರಣ್ಯ ಪಾಲಕ ವಿನಯಚಂದ್ರ, ದೀಕ್ಷಾ.ಕೆ ಹಾಗೂ ವಾಹನ ಚಾಲಕ ಕಿಶೋರ್ ಕುಮಾರ್.ಕೆಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

- Advertisement -

Related news

error: Content is protected !!