
ಉಪ್ಪಿನಂಗಡಿ: ಮಹಿಳೆಯೊಬ್ಬರ ದೂರಿನ ಮೇರೆಗೆ ಮಗಳ ಮೊಬೈಲ್ ಸಂಖ್ಯೆ ಪಡೆದುಕೊಂಡು ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು, ಮದುವೆಯಾಗುವಂತೆ ಒತ್ತಾಯಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ತೆಕ್ಕಾರು ನಿವಾಸಿ ಶೇಷಗಿರಿ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರರ ಮಗಳೊಂದಿಗೆ ನಿರಂತರವಾಗಿ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದ ಆರೋಪಿಯು ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, 2025ರ ನವೆಂಬರ್ 29ರಂದು ತಡರಾತ್ರಿ ದೂರುದಾರರ ಮನೆ ಬಳಿಯ ಕೊಟ್ಟಿಗೆಗೆ ಕತ್ತಿ ಹಿಡಿದುಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು 2025ರ ನವೆಂಬರ್ 30ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 112/2025ರಂತೆ BNS 2023ರ ಕಲಂ 78(1)(i), 329(3), 329(4) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, 2026ರ ಫೆಬ್ರವರಿ 25ರಂದು ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. ಪ್ರಕರಣವು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿದೆ.








