- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ವಿಡಿಯೋ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಡಿಯೋದಲ್ಲಿದ್ದ ಮಹಿಳೆ ಸಿಸಿಬಿ ಅಧಿಕಾರಿಗಳ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. “ನಾನು ಸಿದ್ದರಾಮಯ್ಯ ಅವರನ್ನು ಭೇಟಿಯೇ ಮಾಡಿಲ್ಲ. ಅವರಿಂದ ನನಗೆ ಯಾವುದೇ ತೊಂದರೆಯಾಗಿಲ್ಲ” ಎಂದು ಮಹಿಳೆ ತಿಳಿಸಿದ್ದಾರೆ ಎನ್ನಲಾಗಿದೆ.


ಮಹಿಳೆಯಿಂದ ಉದ್ದೇಶಪೂರ್ವಕವಾಗಿ ಹೇಳಿಕೆಗಳನ್ನು ಪಡೆದು ವಿಡಿಯೋ ಮಾಡಲಾಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖಾ ತಂಡ ಮುಂದಿನ ದಿನಗಳಲ್ಲಿ ನ್ಯಾಯಾಲಯದ ಮುಂದೆ ಮಹಿಳೆಯ ಹೇಳಿಕೆ ದಾಖಲಿಸಲು ಸಿದ್ಧತೆ ನಡೆಸುತ್ತಿದೆ.

- Advertisement -








