Saturday, November 7, 2026
spot_imgspot_img
spot_imgspot_img

ಮಟ್ಕಾ ಅಡ್ಡೆ ಮೇಲೆ ಸಿಸಿಬಿ ದಾಳಿ: ಇಬ್ಬರ ಬಂಧನ, ₹28,840 ನಗದು ವಶ

- Advertisement -
- Advertisement -

ಬೆಳಗಾವಿ: ನಗರದಲ್ಲಿ ಅಕ್ರಮ ಮಟ್ಕಾ ಜೂಜಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಟ್ಕಾ ಅಡ್ಡೆಯೊಂದರ ಮೇಲೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ₹28,840 ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರನ್ನು ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಲಕ್ಷ್ಮೀ ಗಲ್ಲಿಯ ಪ್ರಕಾಶ್ ಪೀರಾಜಿ ಹುಲುಕೋತ್ತೆ (31) ಹಾಗೂ ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯ ರೋಹಿತ್ ಅರ್ಜುನ ಮುರಾರಿ (22) ಎಂದು ಗುರುತಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಮಟ್ಕಾ ಜೂಜಾಟದ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!