Wednesday, June 10, 2026
spot_imgspot_img
spot_imgspot_img

ಬೆಂಗಳೂರಿನಲ್ಲಿ ಜಿಲೆಟಿನ್ ಕಡ್ಡಿ ಸೇರಿ ಸ್ಪೋಟಕ ವಸ್ತು ಪತ್ತೆ; ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರು : ನಗರದ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡ ಅಗ್ರಹಾರ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಫೋಟಕ ವಸ್ತುಗಳಾದ 225 ಜಿಲೆಟಿನ್ ಕಡ್ಡಿಗಳು ಹಾಗೂ 50 ಡಿಟೋನೇಟರ್‌ಗಳು ವಶಕ್ಕೆ ಪಡೆದಿದ್ದಾರೆ.ಕಾಡ ಅಗ್ರಹಾರದ ನಿವಾಸಿ ವೆಂಕಟರಾಮ ರೆಡ್ಡಿ ಎಂಬಾತನ ಬಳಿ ಈ ಸ್ಫೋಟಕಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.

ಪ್ರಾಥಮಿಕ ತನಿಖೆ ಪ್ರಕಾರ, ಜಮೀನಿನಲ್ಲಿ ಬಂಡೆಗಳನ್ನು ಒಡೆಯಲು ಈ ಸ್ಫೋಟಕಗಳನ್ನು ತರಲಾಗಿತ್ತು ಎಂದು ಹೇಳಲಾಗುತ್ತಿದೆ. ಆದರೆ ಪರವಾನಗಿ ಇಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸ್ಫೋಟಕಗಳನ್ನು ದಾಸ್ತಾನು ಮಾಡಿದ ಕಾರಣ ಸ್ಫೋಟಕಗಳ ಕಾಯಿದೆ-1884ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ ಪ್ರಧಾನಿ ಮೋದಿ ನಗರಕ್ಕೆ ಭೇಟಿ ನೀಡದ ವೇಳೆ ಆರ್ಟ್ ಆಫ್ ಲಿವಿಂಗ್ ಬಳಿಯ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಭಾರಿ ಕೋಲಾಹಲ ಸೃಷ್ಟಿಸಿತ್ತು. ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಈಗ ಮತ್ತೆ ಅದೇ ಮಾದರಿಯ ಸ್ಫೋಟಕಗಳು ಸಿಕ್ಕಿರುವುದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

- Advertisement -

Related news

error: Content is protected !!