Tuesday, October 6, 2026
spot_imgspot_img
spot_imgspot_img

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣ: ಸದಸ್ಯೆ ಶಾಂತಾ ಹೊಸಮನಿಗೆ ಮಧ್ಯಂತರ ರಕ್ಷಣೆ ನಿರಾಕರಣೆ

- Advertisement -
- Advertisement -

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಇದೇ ವೇಳೆ, ಅರ್ಜಿದಾರರಿಗೆ ಮಧ್ಯಂತರ ರಕ್ಷಣೆ ನೀಡಲು ನ್ಯಾಯಾಲಯ ನಿರಾಕರಿಸಿದೆ.ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ರಾಜ್ಯ ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿ, ಪ್ರಕರಣದಲ್ಲಿ ಶಾಂತಾ ಹೊಸಮನಿ ಎ2 ಆರೋಪಿಯಾಗಿದ್ದು, ಅಂಕ ನೀಡಿರುವುದಕ್ಕೆ ಸಂಬಂಧಿಸಿದ ಪ್ರಕರಣವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.ಕೆಪಿಎಸ್‌ಸಿ ಪರ ವಕೀಲೆ ಎಂ.ಆರ್. ಸಿಂಚನ ಹಾಜರಾಗಿ, ಸಹಾಯಕ ಕಾರ್ಯದರ್ಶಿ ನೀಡಿರುವ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.ಶಾಂತಾ ಹೊಸಮನಿ ಪರ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ವಾದಿಸಿ, 2025ರ ಜುಲೈನಲ್ಲಿ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.

ಬಳಿಕ ಪ್ರಕ್ರಿಯೆ ಮುಂದುವರಿಸಲು ಆದೇಶಿಸಲಾಗಿತ್ತು. ನ್ಯಾಯಾಲಯದ ಅನುಮತಿ ಇಲ್ಲದೆ ಅಂತಿಮ ಆಯ್ಕೆ ಪಟ್ಟಿ ಹಾಗೂ ಫಲಿತಾಂಶ ಪ್ರಕಟಿಸದಂತೆ ಮುಖ್ಯ ನ್ಯಾಯಮೂರ್ತಿಗಳ ಪೀಠ ಆದೇಶಿಸಿದೆ ಎಂದು ತಿಳಿಸಿದರು.

ಅರ್ಜಿದಾರರ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ಆದೇಶಿಸುವಂತೆ ಅವರು ನ್ಯಾಯಾಲಯವನ್ನು ಕೋರಿದರು.ಎರಡೂ ಕಡೆಯ ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು �⁠ನಾಳೆಗೆ ಮುಂದೂಡಿದೆ.

- Advertisement -

Related news

error: Content is protected !!