


ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಈವರೆಗೂ 37 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಜೊತೆಗೆ ಮಳೆಯಿಂದಾಗಿ 400 ಕೋಟಿ ರೂ.ಗೂ ಅಧಿಕ ಹಾನಿಯುಂಟಾಗಿದೆ.
ನಿರಂತರ ಮಳೆಯಿಂದಾಗಿ ಮಂಡಿ ಜಿಲ್ಲೆಯೊಂದರಲ್ಲಿಯೇ ಹನ್ನೊಂದು ಮಂದಿ ಮೃತಪಟ್ಟಿದ್ದು, ೩೪ ಜನರು ನಾಪತ್ತೆಯಾಗಿದ್ದಾರೆ. ಜೊತೆಗೆ ಕೆಲವೆಡೆ ರಸ್ತೆಗಳು ಸಂಪರ್ಕ ಕಡಿತಗೊಂಡಿದೆ. ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯ ಸೇವೆಗಳು ಅಸ್ತವ್ಯಸ್ತಗೊಂಡಿವೆ. ರಾಜ್ಯಾದ್ಯಂತ ಸುಮಾರು 250 ರಸ್ತೆಗಳ ಸಂಪರ್ಕ ಬಂದ್ ಆಗಿದೆ. 500ಕ್ಕೂ ಹೆಚ್ಚು ವಿದ್ಯುತ್ ವಿತರಣಾ ಟ್ರಾನ್ಸ್ಫಾರ್ಮರ್ಗಳು ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಸುಮಾರು 700 ಕುಡಿಯುವ ನೀರಿನ ಘಟಕಗಳ ಮೇಲೆ ಪರಿಣಾಮವನ್ನುಂಟು ಮಾಡಿದೆ.
ರಾಜಧಾನಿ ಶಿಮ್ಲಾದಲ್ಲಿ ಶಾಲೆಗಳು ನೀರಿನಿಂದ ಜಲಾವೃತಗೊಂಡಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನೊಂಡೆದೆ ಚತುಷ್ಪಥ ರಸ್ತೆಯ ಒಂದು ಭಾಗದ ಕುಸಿದಿದೆ. ಮಳೆಯಿಂದಾಗಿ ಮನೆಗಳು ಕುಸಿಯುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಮಳೆಯಿಂದಾಗಿ ಹಾನಿಯುಂಟಾದ ಕೆಲವು ಕಡೆಗಳಲ್ಲಿ ಎನ್ಡಿಆರ್ಎಫ್, ಎಸ್ಡಿಆರ್ಎಫ್, ಸ್ಥಳೀಯ ಆಡಳಿತ ಮತ್ತು ಪೊಲೀಸರ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.