Thursday, July 2, 2026
spot_imgspot_img
spot_imgspot_img

ಜು.3: ಮಳೆ ಹಿನ್ನಲೆ ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ!!

- Advertisement -
- Advertisement -

ಪುತ್ತೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಜು. 03ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಿದ್ದಾರೆ.ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಬಳಿ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ.ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Related news

error: Content is protected !!