- Advertisement -
- Advertisement -


ಬಂಟ್ವಾಳ, ಜೂ. 8: ಅಕ್ರಮ ಗೋಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡು, ಕೃತ್ಯ ನಡೆದ ಸ್ಥಳವಾದ ಮನೆ ಹಾಗೂ ದನದ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 68/2026ರ ಪ್ರಕರಣದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 4, 7 ಮತ್ತು 12ರಡಿ ತನಿಖೆ ನಡೆಯುತ್ತಿದೆ.




ಪ್ರಕರಣದ ಆರೋಪಿ ಮುಸ್ತಫಾ ಬಾಬ್ತುಗೆ ಸೇರಿದ ಬಂಟ್ವಾಳ ತಾಲೂಕಿನ ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಪ್ರದೇಶದಲ್ಲಿರುವ ಮನೆ ಹಾಗೂ ದನದ ಕೊಟ್ಟಿಗೆಯನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಕಲಂ 8(1)ರ ಅನ್ವಯ ಜಪ್ತಿ ಮಾಡಲಾಗಿದೆ.ಜಪ್ತಿ ಕ್ರಮದ ಕುರಿತು ಮಂಗಳೂರು ಉಪವಿಭಾಗದ ಮಾನ್ಯ ಉಪ ವಿಭಾಗೀಯ ದಂಡಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -








