Saturday, September 5, 2026
spot_imgspot_img
spot_imgspot_img

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿಗೆ ಗಡಿಪಾರು ನೋಟಿಸ್

- Advertisement -
- Advertisement -

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಲಕ್ಷಪ್ಪ ಕೋಡಿ ನಿವಾಸಿ ನರಸಿಂಹ ಶೆಟ್ಟಿ (ಯಾನೆ ಮಾಣಿ ನರಸಿಂಹ) ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ಜಿಲ್ಲಾ ಪೊಲೀಸ್ ಇಲಾಖೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರು ಸಲ್ಲಿಸಿರುವ ವರದಿಯ ಆಧಾರದ ಮೇಲೆ, ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ನರಸಿಂಹ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಿಂದ ಹೊರ ಜಿಲ್ಲೆಯೊಂದಕ್ಕೆ ಗಡಿಪಾರು ಮಾಡುವ ಪ್ರಸ್ತಾವನೆ ಮಾಡಲಾಗಿದ್ದು, ಈ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸೆ. 9, 2026ರೊಳಗಾಗಿ ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ಮುಂದೆ ಹಾಜರುಪಡಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!