Wednesday, October 7, 2026
spot_imgspot_img
spot_imgspot_img

ಜನವರಿಯಲ್ಲಿ ಜಿಲ್ಲಾ-ತಾಲೂಕು ಪಂಚಾಯತ್ ಚುನಾವಣೆ; ಸಂಪುಟ ಸಭೆಯಲ್ಲಿ ಚರ್ಚೆ

- Advertisement -
- Advertisement -

ಬೆಂಗಳೂರು : ಮುಂದಿನ ಹೊಸ ವರ್ಷ ಆರಂಭದಲ್ಲಿಯೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ನಡೆಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ಗೊತ್ತಾಗಿದೆ.ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆ ನಡೆಸಲಾಗಿದ್ದು, ಚುನಾವಣಾ ಆಯೋಗ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರಕಾರ ಮುಂದಾಗಿದೆ.

ಎರಡು ದಿನಗಳ ಹಿಂದೆ ರಾಜ್ಯ ಚುನಾವಣಾ ಆಯೋಗಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಮನವಿ ಸಲ್ಲಿಸಿತ್ತು. ರಾಜ್ಯದಲ್ಲಿ ಪರಿಷತ್‌ ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ರಾಜ್ಯ ಚುನಾವಣಾ ಆಯೋಗ ಮೀಸಲಾತಿ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ಕಳುಹಿಸಿದೆ. ಚುನಾವಣಾ ಆಯೋಗ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದ ಬಳಿಕ ಆ ಸಂಬಂಧ ಕರಡು ಅಧಿಸೂಚನೆ ಹೊರಬೀಳಲಿದೆ.

ಸಾರ್ವಜನಿಕ ಆಕ್ಷೇಪ ಪರಿಗಣಿಸಿದ ಬಳಿಕ ಡಿಸೆಂಬ‌ರ್ ಮಧ್ಯದಲ್ಲಿ ವಾರ್ಡುವಾರು ಮೀಸಲಾತಿ ಪಟ್ಟಿಯ ಅಂತಿಮ ಅಧಿಸೂಚನೆ ಪ್ರಕಟವಾಗಲಿದ್ದು. ಜನವರಿ ಮೊದಲ ವಾರದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ರಾಜ್ಯ ಮುಂದಾಗಿದ್ದೇವೆ.

ಈ ಚುನಾವಣೆಯ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವ‌ರ್ ಖಂಡ್ರೆ ಮಾಹಿತಿ ಹಂಚಿಕೊಂಡಿದ್ದಾರೆ.

- Advertisement -

Related news

error: Content is protected !!