- Advertisement -
- Advertisement -


ಬಂಟ್ವಾಳ: ಮಾಣಿ–ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಸಮೀಪದ ದಾಸಕೋಡಿಯಲ್ಲಿ ರಸ್ತೆ ದಾಟುತ್ತಿದ್ದ ಕೂಲಿ ಕಾರ್ಮಿಕರೊಬ್ಬರಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.30ರಂದು ಸಂಜೆ ನಡೆದಿದೆ.

ಮೃತರನ್ನು ದಾಸಕೋಡಿ ನಿವಾಸಿ ಹರೀಶ್ ನಾಯ್ಕ ಎಂದು ಗುರುತಿಸಲಾಗಿದೆ. ಅವರು ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು.ಮಾಹಿತಿಯಂತೆ, ಹರೀಶ್ ನಾಯ್ಕ ಅವರು ಕಲ್ಲಡ್ಕದಿಂದ ವಾಹನದಲ್ಲಿ ಬಂದು ದಾಸಕೋಡಿಯಲ್ಲಿ ಇಳಿದಿದ್ದರು. ಬಳಿಕ ರಸ್ತೆ ದಾಟುತ್ತಿದ್ದ ವೇಳೆ ಮಾಣಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತ ಸಂಜೆ ಸುಮಾರು 6.45ರ ವೇಳೆಗೆ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಹರೀಶ್ ನಾಯ್ಕ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -








