Friday, October 2, 2026
spot_imgspot_img
spot_imgspot_img

ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಹತ್ಯೆ ಪ್ರಕರಣ: ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.2015ರ ನವೆಂಬರ್ 2ರಂದು ಮಂಗಳೂರು ಕಾರಾಗೃಹದಲ್ಲಿ ಮಾಡೂರು ಯುಸೂಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು 2026ರ ಅಕ್ಟೋಬರ್ 1ರಂದು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು ₹76,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಶಿಕ್ಷೆಗೊಳಗಾದವರು ಲಿತೇಶ್ ಪೂಜಾರಿ @ ಲಿತ್ತು, ಶೋಭರಾಜ್ @ ಶೋಭಿ, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ @ ಉಮೇಶ್ ಕುಂಬಾರ.ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ. ಮೋಹನ್ ಕುಮಾರ್ ಅವರು ಸರ್ಕಾರದ ಪರವಾಗಿ ವಾದಿಸಿದ್ದರು.

ಅಂದಿನ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ತಿಲಕ್ ಚಂದ್ರ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

- Advertisement -

Related news

error: Content is protected !!