Sunday, July 19, 2026
spot_imgspot_img
spot_imgspot_img

“ಜನರ ಆಪೇಕ್ಷೆಯಂತೆ ಎನ್‌ಕೌಂಟರ್ ಮಾಡಿದರೆ ಸಮಾಜ ಗೌರವಿಸುತ್ತದೆ”- ಅರುಣ್ ಕುಮಾರ್ ಪುತ್ತಿಲ

- Advertisement -
- Advertisement -

ಬಂಟ್ವಾಳ: ಬಂಟ್ವಾಳದಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅರುಣ್ ಕುಮಾರ್ ಪುತ್ತಿಲ, ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

“ಈ ರೀತಿಯ ಪೈಶಾಚಿಕ ಕೃತ್ಯಗಳು ಸಮಾಜದಲ್ಲಿ ನಡೆಯುತ್ತಿದ್ದರೆ ಯಾರಿಗೂ ಸುರಕ್ಷಿತವಾಗಿ ಬದುಕುವ ವ್ಯವಸ್ಥೆಯೇ ಇಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ. ಇಂತಹ ಕೃತ್ಯಗಳ ವಿರುದ್ಧ ಜನರ ಆಕ್ರೋಶವನ್ನು ನಾನು ಸ್ವಾಗತಿಸುತ್ತೇನೆ. ಜನರ ಆಪೇಕ್ಷೆಯಂತೆ ಎನ್‌ಕೌಂಟರ್ ಮಾಡಿದರೆ ಸಮಾಜ ಗೌರವಿಸುತ್ತದೆ,” ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಲ್ಲದೆ, ರಾಜ್ಯದ ಗೃಹ ಸಚಿವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಅತ್ಯಂತ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದ ಅವರು, ಮೃತ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸುವ ವ್ಯವಸ್ಥೆಯನ್ನೂ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.

- Advertisement -

Related news

error: Content is protected !!