Saturday, July 4, 2026
spot_imgspot_img
spot_imgspot_img

ವಿಟ್ಲ: ಕರೋಪಾಡಿಯಲ್ಲಿ ಅಕ್ರಮ ಕೆಂಪುಕಲ್ಲು-ಮಣ್ಣು ಗಣಿಗಾರಿಕೆ ಮೇಲೆ ಪೊಲೀಸ್ ದಾಳಿ; ವಾಹನ, ಯಂತ್ರೋಪಕರಣಗಳ ವಶ

- Advertisement -
- Advertisement -

ವಿಟ್ಲ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ, ಗಣಿಗಾರಿಕೆಗೆ ಬಳಸಲಾಗುತ್ತಿದ್ದ ವಾಹನಗಳು ಮತ್ತು ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಜುಲೈ 2ರಂದು ಸಂಜೆ, ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದರು.

ಈ ವೇಳೆ ಪೊಲೀಸ್ ವಾಹನವನ್ನು ಕಂಡ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.ಸ್ಥಳ ಪರಿಶೀಲಿಸಿದ ವೇಳೆ ಯಾವುದೇ ಪರವಾನಗಿ ಇಲ್ಲದೆ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದ್ದು, ಕೃತ್ಯಕ್ಕೆ ಬಳಸಲಾಗುತ್ತಿದ್ದ ಯಂತ್ರೋಪಕರಣಗಳು ಪತ್ತೆಯಾಗಿವೆ. ಅಲ್ಲದೇ ಸಮೀಪದಲ್ಲೇ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದು, ಮಣ್ಣನ್ನು ಸಾಗಿಸುವ ಲಾರಿಗಳ ತೂಕ ತೂಗಲು ನಿರ್ಮಿಸಿದ್ದ ವೇ-ಬ್ರಿಡ್ಜ್ ಹಾಗೂ ಕಟ್ಟಡವೂ ಪತ್ತೆಯಾಗಿದೆ.ಪೊಲೀಸರು ಗಣಿಗಾರಿಕೆಗೆ ಸಂಬಂಧಿಸಿದ ಯಂತ್ರೋಪಕರಣಗಳು ಹಾಗೂ ಇತರೆ ಸೊತ್ತುಗಳನ್ನು ವಶಪಡಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.ಈ ಸಂಬಂಧ ಮುಳಿಗದ್ದೆ ನಿವಾಸಿ ಝಕಾರಿಯಾ ಹಾಗೂ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 148/2026 ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಮೈನರ್ ಮಿನರಲ್ ಕನ್ಸೆಷನ್ ರೂಲ್ಸ್-1994ರ ಕಲಂ 3 ಮತ್ತು 44ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.

- Advertisement -

Related news

error: Content is protected !!