- Advertisement -
- Advertisement -

ಮಂಗಳೂರು: ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ (ಪಿಯುಸಿ) ಕಾಲೇಜುಗಳಿಗೆ ಜುಲೈ 25ರಂದು (ಶನಿವಾರ) ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ಮಳೆ ಸಂಬಂಧಿತ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.
- Advertisement -








