Wednesday, August 19, 2026
spot_imgspot_img
spot_imgspot_img

₹1.36 ಲಕ್ಷ ಮೌಲ್ಯದ MDMA ವಶ; ಕೇರಳ ಮೂಲದ ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ನಗರದಲ್ಲಿ ಮಾದಕ ವಸ್ತು ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಂಗಳೂರು ಪೂರ್ವ ಠಾಣೆ ಪೊಲೀಸರು, MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.ಆ.18ರಂದು ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯ ಬದಿಯಲ್ಲಿ ಆಟೋ ರಿಕ್ಷಾದಲ್ಲಿ MDMA ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತನನ್ನು ಕೇರಳದ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂದು ಗುರುತಿಸಲಾಗಿದೆ.

ಆತನಿಂದ 13.69 ಗ್ರಾಂ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹2.94 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Related news

error: Content is protected !!