Monday, August 24, 2026
spot_imgspot_img
spot_imgspot_img

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿ ಬಂಧನ

- Advertisement -
- Advertisement -

ವಿಟ್ಲ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಅಸಾಮಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯ ಅ.ಕ್ರ. 103/2019ರ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 341, 353, 427, 34 ಹಾಗೂ KPDL ಕಾಯ್ದೆಯ ಕಲಂ 2, 4(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಿಟ್ಲ ಪಡ್ನೂರು ನಿವಾಸಿ ಗಣೇಶ್ (30) ಎಂಬಾತನ ವಿರುದ್ಧ ವಾರಂಟ್ ಜಾರಿಯಾಗಿತ್ತು.

ದಿನಾಂಕ 23.08.2026ರಂದು ವಿಟ್ಲ ಠಾಣಾ ಪೊಲೀಸ್ ನಿರೀಕ್ಷಕರು ಹಾಗೂ ಉಪನಿರೀಕ್ಷಕರ ಮಾರ್ಗದರ್ಶನದಲ್ಲಿ ಹೆಡ್ ಕಾನ್‌ಸ್ಟೆಬಲ್ 951 ಹರೀಶ್ ಮತ್ತು ಪೊಲೀಸ್ ಕಾನ್‌ಸ್ಟೆಬಲ್ 2345 ರಮೇಶ್ ಅವರು ಕಾರ್ಯಾಚರಣೆ ನಡೆಸಿ ಗಣೇಶ್‌ನನ್ನು ದಸ್ತಗಿರಿ ಮಾಡಿದ್ದಾರೆ.ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!