
ಪುತ್ತೂರು: ವಿಟ್ಲದ ಪಿಎಂಶ್ರೀ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಟೇಕ್ವಾಂಡೋ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ರಿಯೋನ್ ಲಸ್ರಾದೋ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ.

41 ಕೆ.ಜಿ. ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ರಿಯೋನ್ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಮುಂದಿನ ಹಂತವಾಗಿ ಯಾದಗಿರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾಟದಲ್ಲಿ ಆತ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾನೆ.ರಿಯೋನ್‌ಗೆ ಮಾಧವ ಅಳಿಕೆ ಅವರ ಮಾರ್ಗದರ್ಶನದಲ್ಲಿ ರೋಹಿತ್ ಎಸ್.ಎನ್. ತರಬೇತಿ ನೀಡುತ್ತಿದ್ದಾರೆ. ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಅವರು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.ರಿಯೋನ್ ಲಸ್ರಾದೋ ಅವರು ರೋಶನ್ ಲಸ್ರಾದೋ ಹಾಗೂ ಸುಶಾಂತಿ ಸುಪ್ರಿಯ ದಂಪತಿಯ ಪುತ್ರನಾಗಿದ್ದಾರೆ.
ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತರಲಿ ಎಂದು ಶಾಲಾ ಶಿಕ್ಷಕರು, ಪೋಷಕರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ








