ಪುತ್ತೂರು, ಸೆ. 4: ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶ್ರೀ ವೀರಾಂಜನೇಯ ಫ್ರೆಂಡ್ಸ್, ಪದೆಂಜಾರು–ಕಬಕ ಇದರ ವತಿಯಿಂದ 12ನೇ ವರ್ಷದ ಮೊಸರು ಕುಡಿಕೆ ಉತ್ಸವ ಹಾಗೂ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ. 4ರಂದು ಪಲಜಾರಿನಲ್ಲಿ ನಡೆಯಲಿದೆ.ಬೆಳಗ್ಗೆ 8.30ಕ್ಕೆ ನೂತನ ಕಟ್ಟಡದ ಉದ್ಘಾಟನೆ ನಡೆಯಲಿದ್ದು, ಕೃಷಿಕರಾದ ಭೀಮಯ್ಯ ಭಟ್ ಪದೆಂಜಾರು ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ವಿಜಯ ಸಾಮ್ರಾಟ್ ಪುತ್ತೂರು ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಜಿಲ್ಲಾ ಕಾರ್ಯದರ್ಶಿ ಶಿವಕಿರಣ್ ಭಟ್, ಪುತ್ತೂರು ಗ್ರಾಮಾಂತರ ಮಂಡಲ ಯುವಮೋರ್ಚಾ ಅಧ್ಯಕ್ಷ ಶಿಶಿರ್ ಪೆರ್ವೋಡಿ ಸೇರಿದಂತೆ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಉತ್ಸವದ ಅಂಗವಾಗಿ ಅಂಗನವಾಡಿ ಮಕ್ಕಳಿಂದ ಹಿಡಿದು 10ನೇ ತರಗತಿ ವಿದ್ಯಾರ್ಥಿಗಳು, ಯುವಕ-ಯುವತಿಯರು ಹಾಗೂ ಮಾತೆಯರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಓಟ, ಬಾಲ್ ಪಾಸಿಂಗ್, ಕಪ್ ಬ್ಯಾಲೆನ್ಸ್, ಸಂಗೀತ ಕುರ್ಚಿ, ಅಂಬೆ ಚಮಚ ಓಟ, ಬಾಟಲಿಗೆ ಪೆನ್ನು ಹಾಕುವುದು, ಹಗ್ಗಜಗ್ಗಾಟ, ಮಡಕೆ ಒಡೆಯುವುದು ಸೇರಿದಂತೆ ಹಲವು ಸ್ಪರ್ಧೆಗಳು ನಡೆಯಲಿವೆ.ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನವಚೇತನ ಚಿಟ್ಸ್ ಕಂಪೆನಿ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಲೋಕೇಶ್ ಶೆಟ್ಟಿ ಕಲ್ಲಂದಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಶ್ರೀ ಲಕ್ಷ್ಮೀವೆಂಕಟರಮಣ ಮಠದ ಅಧ್ಯಕ್ಷ ಉಮಾಶಂಕರ ಎದುರ್ಕಳ, ಶ್ರೀ ಮಹಾದೇವೀ ಧರ್ಮಸೇವಾ ವಿಶ್ವಸ್ಥ ಮಂಡಳಿ ಕಬಕದ ಪ್ರಧಾನ ಕಾರ್ಯದರ್ಶಿ ಜತ್ತಪ್ಪ ಗೌಡ ಅಡ್ಯಾಲು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.ಸಮಾರೋಪದಲ್ಲಿ ಸನ್ಮಾನ ಕಾರ್ಯಕ್ರಮ ಹಾಗೂ ಅದೃಷ್ಟಚೀಟಿ ಫಲಿತಾಂಶ ಪ್ರಕಟಿಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಶ್ರೀ ವೀರಾಂಜನೇಯ ಫ್ರೆಂಡ್ಸ್ ಹಾಗೂ ಶ್ರೀ ವೀರಾಂಜನೇಯ ಮಹಿಳಾ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಮಧ್ಯಾಹ್ನ ಭೋಜನದ ವ್ಯವಸ್ಥೆ ಕಲ್ಪಿಸಲಾಗಿದೆ. ಸ್ಪರ್ಧೆಗಳಿಗೆ ಸಂಬಂಧಿಸಿದಂತೆ ತೀರ್ಪುಗಾರರು ಹಾಗೂ ಸಂಘಟಕರ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.








