- Advertisement -
- Advertisement -


ಮಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, 31 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ (ನ.18) ಆದೇಶ ಹೊರಡಿಸಿದೆ.


ಈ ವರ್ಗಾವಣೆಯಲ್ಲಿ ಮಂಗಳೂರು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
2007ನೇ ಬ್ಯಾಚ್ನ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಎನ್. ಶಶಿಕುಮಾರ್ ಅವರು ಈ ಹಿಂದೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಹೊಸ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಇದೀಗ ಮಂಗಳೂರು ಪಶ್ಚಿಮ ವಲಯದ ಐಜಿಪಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
- Advertisement -








