Monday, June 15, 2026
spot_imgspot_img
spot_imgspot_img

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಸಿಜೆಪಿ ಬೃಹತ್ ಪ್ರತಿಭಟನೆ: ನಟ ಪ್ರಕಾಶ್ ರಾಜ್ ಬೆಂಬಲ

- Advertisement -
- Advertisement -

ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಯಿತು. ಭಾರೀ ಮಳೆಯ ನಡುವೆಯೂ ನೂರಾರು ಯುವಕರು, ವಿದ್ಯಾರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸಿದರು.ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪೈ ಹಾಗೂ ವಕ್ತಾರ ಸೌರವ್ ದಾಸ್ ನೇತೃತ್ವದಲ್ಲಿ ನಡೆದ ಧರಣಿಗೆ ಬಹುಭಾಷಾ ನಟ Prakash Raj ಸೇರಿದಂತೆ ಹಲವು ಗಣ್ಯರು ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳು ಹಾಗೂ ಪರೀಕ್ಷಾ ಹಗರಣಗಳನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಧರಣಿಯಲ್ಲಿ ಮಾತನಾಡಿದ ಪ್ರಕಾಶ್ ರಾಜ್, ದೇಶದಲ್ಲಿ ನಿರುದ್ಯೋಗ, ಆರ್ಥಿಕ ಸಂಕಷ್ಟ ಮತ್ತು ಶಿಕ್ಷಣ ಕ್ಷೇತ್ರದ ಸಮಸ್ಯೆಗಳು ಹೆಚ್ಚುತ್ತಿದ್ದು, ಯುವಜನತೆ ತಮ್ಮ ಭವಿಷ್ಯಕ್ಕಾಗಿ ಹೋರಾಟಕ್ಕೆ ಇಳಿದಿರುವುದು ಆತಂಕಕಾರಿ ಬೆಳವಣಿಗೆ ಎಂದರು. ಅನ್ಯಾಯಗಳ ವಿರುದ್ಧ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಬೇಕು ಎಂದು ಕರೆ ನೀಡಿದರು.ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ನೀಟ್ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಹೊಣೆಯನ್ನು ಕೇಂದ್ರ ಶಿಕ್ಷಣ ಸಚಿವರು ವಹಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಸಿಜೆಪಿ ವಕ್ತಾರ ಸೌರವ್ ದಾಸ್ ಮಾತನಾಡಿ, ನೀಟ್ ಮಾತ್ರವಲ್ಲದೆ ಸಿಬಿಎಸ್‌ಇ ಫಲಿತಾಂಶಗಳಲ್ಲಿಯೂ ಅಕ್ರಮಗಳ ಆರೋಪ ಕೇಳಿಬಂದಿದ್ದು, ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ಧ ದೇಶಾದ್ಯಂತ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.ಧರಣಿಯಲ್ಲಿ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು ಹಾಗೂ ನೂರಾರು ಯುವಕರು ಭಾಗವಹಿಸಿದ್ದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಧರಣಿಗೆ ಮುನ್ನ ಸಿಜೆಪಿ ಕಾರ್ಯಕರ್ತರು ದಿವಂಗತ Puneeth Rajkumar ಅವರ ಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.

- Advertisement -

Related news

error: Content is protected !!