- Advertisement -
- Advertisement -

ಹೊಸದಿಲ್ಲಿ: ದಿಲ್ಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ದೇವೊಸ್ಮಿತಾ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದಲ್ಲಿ ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ. ಆಸ್ತಿ ವಿವಾದವೇ ಹತ್ಯೆಗೆ ಕಾರಣ ಎಂದು ಪ್ರಾಥಮಿಕವಾಗಿ ಶಂಕೆ ವ್ಯಕ್ತವಾಗಿದೆ.
ದಿಲ್ಲಿಯ ಪೂರ್ವ ಭಾಗದ ವಸುಂಧರಾ ಎನ್‌ಕ್ಲೇವ್‌ನ ಸತ್ಯಂ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ನಿವಾಸದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ದೇವೊಸ್ಮಿತಾ ಪಾಲ್ ಶಿವಾಜಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿದ್ದರು.
ಪೊಲೀಸರ ಪ್ರಕಾರ, ಆರೋಪಿಗಳು ಪಶ್ಚಿಮ ಬಂಗಾಳದ ಬರ್ಧಮಾನದಿಂದ ಸುಮಾರು 1,400 ಕಿಲೋಮೀಟರ್ ಪ್ರಯಾಣ ಮಾಡಿ ದಿಲ್ಲಿಗೆ ಬಂದು ಕೃತ್ಯ ಎಸಗಿದ್ದಾರೆ.
ಮೃತ ಪ್ರಾಧ್ಯಾಪಕಿಯ ಮನೆಗೆ ಅವರು ಪರಿಚಿತರಂತೆ ತೆರಳಿದ್ದು, ಬಲವಂತದ ಪ್ರವೇಶಕ್ಕೆ ಸಂಬಂಧಿಸಿ ಯಾವುದೇ ಗುರುತುಗಳು ಪತ್ತೆಯಾಗಿಲ್ಲ ಎಂದು ತನಿಖೆ ವೇಳೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
- Advertisement -








