- Advertisement -
- Advertisement -


ಹಾಸನ: ಹಾಸನ ಜಿಲ್ಲಾ ಚೊಚ್ಚಲ ಚುಟುಕು ಸಾಹಿತ್ಯ ಸಮ್ಮೇಳನ–2026ರ ಅಂಗವಾಗಿ ಹಾಸನ ನಗರದ ಎ.ವಿ. ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ನಡೆದ ಬಹುಭಾಷಾ ಚುಟುಕು ಕವಿಗೋಷ್ಠಿಯಲ್ಲಿ ಪುತ್ತೂರಿನ ಅಂಕಣಕಾರ್ತಿ ಹಾಗೂ ಸಾಹಿತಿ ಮಲ್ಲಿಕಾ ಜೆ. ರೈ ಅವರು ತುಳು ಚುಟುಕುಗಳನ್ನು ವಾಚಿಸಿ ಮೆಚ್ಚುಗೆ ಗಳಿಸಿದರು.ಈ ಸಂದರ್ಭದಲ್ಲಿ ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಲ್ಲಿಸಿರುವ ವಿಶಿಷ್ಟ ಸೇವೆ, ಅಸಾಧಾರಣ ಸಾಹಿತ್ಯ ಪ್ರತಿಭೆ ಹಾಗೂ ಸಮಾಜಕ್ಕೆ ನೀಡಿರುವ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ, ಹಾಸನ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ‘ಚುಟುಕು ಶ್ರೀ’ ರಾಜ್ಯ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಯಿತು.


ಸಾಹಿತ್ಯ ಕ್ಷೇತ್ರದಲ್ಲಿ ಮಲ್ಲಿಕಾ ಜೆ. ರೈ ಅವರ ನಿರಂತರ ಸೇವೆ ಮತ್ತು ತುಳು ಭಾಷೆಯ ಚುಟುಕು ಸಾಹಿತ್ಯಕ್ಕೆ ನೀಡಿರುವ ಕೊಡುಗೆಯನ್ನು ಸಮ್ಮೇಳನದಲ್ಲಿ ವಿಶೇಷವಾಗಿ ಪ್ರಶಂಸಿಸಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಹಿತ್ಯಾಸಕ್ತರು, ಕವಿಗಳು ಹಾಗೂ ಪರಿಷತ್ತಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Advertisement -








