Thursday, November 5, 2026
spot_imgspot_img
spot_imgspot_img

ಪತ್ನಿಯ ಕಣ್ಣೆದುರಲ್ಲೇ ವ್ಯಕ್ತಿಯ ಭೀಕರ ಹತ್ಯೆ: ಎರಡು ಸುತ್ತು ಗುಂಡಿನ ದಾಳಿ!

- Advertisement -
- Advertisement -

ವಿಜಯಪುರ : ವಿಜಯಪುರದಲ್ಲಿ ಹಾಡಹಗಲೇ ಭೀಕರಕೊಲೆಯೊಂದು ನಡೆದಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಭೀತಿಯ ವಾತಾವರಣ ನಿರ್ಮಾಣವಾಗಿದೆ. ನಗರದ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಅಫಜಲಪುರ ಟಕ್ಕೆ ನಿವಾಸಿಯಾಗಿರುವ ಯಾಸೀನ್ ಎಂಬುವವರು ತಮ್ಮ ಪತ್ನಿಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಾರ್ಗಮಧ್ಯೆ ಏಕಾಏಕಿ ಬಂದ ದುಷ್ಕರ್ಮಿಗಳ ಗುಂಪು ಯಾಸೀನ್ ಅವರನ್ನು ತಡೆದು, ಪತ್ನಿಯ ಕಣ್ಣೆದುರಲ್ಲೇ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ.ದುಷ್ಕರ್ಮಿಗಳು ಒಟ್ಟು ಎರಡು ಸುತ್ತು ಗುಂಡು ಹಾರಿಸಿದ್ದು ಗಂಭೀರವಾಗಿ ಗಾಯಗೊಂಡ ಯಾಸೀನ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಳಿಕ ಮೃತದೇಹವನ್ನು ವಿಜಯಪುರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊಲೆ ನಡೆದ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಮತ್ತು ಶ್ವಾನದಳದ ಸಿಬ್ಬಂದಿ ಸಾಕ್ಷ್ಯ ಸಂಗ್ರಹಿಸಿದ್ದಾರೆ.

ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ಹಳೆಯ ವೈಷಮ್ಯವೇ ಕಾರಣವೇ ಅಥವಾ ಬೇರೆನಾದರೂ ಹಣಕಾಸು ವಿಚಾರಗಳಿವೆಯೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

- Advertisement -

Related news

error: Content is protected !!