Sunday, September 27, 2026
spot_imgspot_img
spot_imgspot_img

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ: ಪೊಲೀಸ್ ವಿಚಾರಣೆಗೆ ಕಾಲಾವಕಾಶ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಮನವಿ

- Advertisement -
- Advertisement -

ಬಂಟ್ವಾಳ : ಗ್ರಾಮಾಂತರ ಪೊಲೀಸ್‌ ಠಾಣೆಯಿಂದ ನೀಡಲಾಗಿರುವ ಪೊಲೀಸ್‌ ನೋಟೀಸ್‌ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.26ರಂದು ತನಿಖೆಗೆ ಸಹಕರಿಸುವಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗೆ ಸೆ.23ರಂದು ನೋಟೀಸ್ ನೀಡಿದ್ದರು. ಆದರೆ ನೋಟೀಸ್ ತಲುಪಿದ ಬಳಿಕ ಕಡಿಮೆ ಅವಧಿಯಲ್ಲಿ ಹಾಜರಾಗುವುದು ಅನಾನುಕೂಲವಾಗಿದ್ದು, ವಿವಿಧ ಸಂಘ-ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಿನ್ನೆಲೆಯಲಿ ಹಲವು ಕಾರ್ಯಕ್ರಮಗಳು ಮುಂಚಿತವಾಗಿಯೇ ನಿಗದಿಯಾಗಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ತಮ್ಮ ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ನೋಟೀಸ್‌ನಲ್ಲಿ ಸೂಚಿಸಿರುವ ದಿನಾಂಕದಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವಿಚಾರಣೆಗೆ ಹಾಜರಾಗಲು ಸೂಕ್ತ ಕಾಲಾವಕಾಶ ನೀಡಬೇಕು ಎಂದು ಪ್ರಭಾಕರ ಭಟ್ ಪರ ವಕೀಲರು ಪೊಲೀಸ್‌ ಠಾಣೆಯ ಸಹಾಯಕ ತನಿಖಾಧಿಕಾರಿ ಕಲೈಮಾರ್ ಪಿ.ಅವರಿಗೆ ನೀಡಿದ ಮನವಿಯಲ್ಲಿ ಕೋರಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!