Monday, July 20, 2026
spot_imgspot_img
spot_imgspot_img

4 ಮತದಾರರ ಗುರುತಿನ ಚೀಟಿ ಹೊಂದಿದ ಆರೋಪ: ನಟ ಪ್ರಕಾಶ್ ರಾಜ್‌ಗೆ ನ್ಯಾಯಾಲಯದಿಂದ ಜಾಮೀನು

- Advertisement -
- Advertisement -

ಬೆಂಗಳೂರು : ‘ಬೇರೆ ಬೇರೆ ಸ್ಥಳಗಳಲ್ಲಿ ನಾಲ್ಕು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ’ ಎಂದು ಆರೋಪಿಸಲಾದ ಖಾಸಗಿ ದೂರಿನ ಕ್ರಿಮಿನಲ್‌ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಗರದ ವಿಚಾರಣಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ವರದಿಯಾಗಿದೆ.ನಾಲ್ಕು ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪ ಸಂಬಂಧ ದಿಲೀಪ್‌ ಕುಮಾ‌ರ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.ಶುಕ್ರವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿಯಾಗಿದ್ದ ಜಾಮೀನು ರಹಿತ ಬಂಧನದ ವಾರಂಟ್ ಹಿನ್ನೆಲೆಯಲ್ಲಿ ಪ್ರಕಾಶ್ ರಾಜ್ ಅವರು ನಗರದ 48ನೇ ಹೆಚ್ಚುವರಿ ಚೀಫ್ ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್ ಕೋರ್ಟ್ ನ್ಯಾಯಾಧೀಶರಾದ ಜ್ಯೋತಿ ಶಾಂತಪ್ಪ ಕಾಳೆ ಅವರ ಮುಂದೆ ಹಾಜರಾಗಿ ವಾರಂಟ್ ಹಿಂಪಡೆಯಲು ತಮ್ಮ ವಕೀಲರ ಮೂಲಕ ಮನವಿ ಮಾಡಿದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕಾಶ್ ರಾಜ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, 4 ಸಾವಿರ ರೂ. ನಗದು ಶೂರಿಟಿ ನೀಡಲು ಕೋರ್ಟ್ ಸೂಚಿಸಿದೆ.

- Advertisement -

Related news

error: Content is protected !!