Monday, October 19, 2026
spot_imgspot_img
spot_imgspot_img

ಬಂಟ್ವಾಳ: ಸಿದ್ದಕಟ್ಟೆಯಲ್ಲಿ ಯುವಕನಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು

- Advertisement -
- Advertisement -

ಬಂಟ್ವಾಳ: ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ರವಿವಾರ ರಾತ್ರಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.

ಸಿದ್ದಕಟ್ಟೆ ಸಮೀಪದ ಮಂಚಕಲ್ಲು ಮೇಲುಗುಡ್ಡೆ ನಿವಾಸಿ ಪ್ರಕಾಶ್ ಪೂಜಾರಿ (30) ಗಾಯಗೊಂಡ ಯುವಕ. ಅವರನ್ನು ಚಿಕಿತ್ಸೆಗಾಗಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಸ್ಥಳೀಯ ಯುವಕರ ತಂಡ ಪ್ರಕಾಶ್ ಪೂಜಾರಿ ಅವರಿಗೆ ಚೂರಿಯಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಘಟನೆಯ ನಿಖರ ಕಾರಣ ತಿಳಿದುಬಂದಿಲ್ಲ.

ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!