Tuesday, September 1, 2026
spot_imgspot_img
spot_imgspot_img

ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಅಂಬರ್‌ಗ್ರೀಸ್ (ತಿಮಿಂಗಿಲ ವಾಂತಿ) ಅಕ್ರಮ ಸಾಗಾಟ: ಇಬ್ಬರ ಬಂಧನ

- Advertisement -
- Advertisement -

ವಿಟ್ಲ, ಜೂನ್ 26: ವನ್ಯಜೀವಿ ಉತ್ಪನ್ನವಾದ ಅಂಬರ್‌ಗ್ರೀಸ್‌ (ತಿಮಿಂಗಿಲ ವಾಂತಿ)ಯನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಜೂನ್ 24ರ ರಾತ್ರಿ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಬೋಳಂತಿಮೊಗರು ಪ್ರದೇಶದಲ್ಲಿ ಸ್ಕೂಟರ್‌ನ್ನು ತಡೆದು ಪರಿಶೀಲನೆ ನಡೆಸಲಾಯಿತು. ಈ ವೇಳೆ ಬಂಟ್ವಾಳ ಕರೋಪಾಡಿ ನಿವಾಸಿ ಕುಮುದಾಕ್ಷ (27) ಹಾಗೂ ವಿಟ್ಲ ಕಸಬಾ ನಿವಾಸಿ ಧನು ಕುಮಾರ್ (32) ಅವರ ಬಳಿ ಯಾವುದೇ ಪರವಾನಿಗೆ ಇಲ್ಲದೆ ಸುಮಾರು 5.73 ಗ್ರಾಂ ತೂಕದ ಅಂಬರ್‌ಗ್ರೀಸ್‌ ಪತ್ತೆಯಾಯಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್‌ಗಳು, ದ್ವಿಚಕ್ರ ವಾಹನ ಹಾಗೂ ಅಂಬರ್‌ಗ್ರೀಸ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 140/2026ರಡಿ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಕಲಂ 51 ಹಾಗೂ ಬಿಎನ್‌ಎಸ್‌ 2023ರ ಕಲಂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

- Advertisement -

Related news

error: Content is protected !!