

ವಿಟ್ಲ: ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅ.2ರಂದು ಮಧ್ಯಾಹ್ನ ಪೆರುವಾಯಿಯಲ್ಲಿ ನಡೆದಿದೆ.


ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಕೋಳಿ ಅಂಕ ನಡೆಯುತ್ತಿರುವುದು ದೃಢಪಟ್ಟಿದೆ.ದಾಳಿ ನಡೆಸಿದ ಪೊಲೀಸರು ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಿದ್ದ ₹3,050 ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 203/2026ರಂತೆ ಪ್ರಕರಣ ದಾಖಲಾಗಿದ್ದು, ಕೆಪಿ ಕಾಯ್ದೆಯ ಕಲಂ 87, 93, ಪ್ರಾಣಿ ಹಿಂಸೆ ತಡೆ ಕಾಯ್ದೆ 1960ರ ಕಲಂ 3, 11(1)(m)(ii), 11(1)(n) ಹಾಗೂ ಬಿಎನ್‌ಎಸ್ 2023ರ ಕಲಂ 112ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.








